'ಅಕ್ಷಯ ತೃತೀಯ'. ಹಿಂದೂ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅವುಗಳೆಂದರೆ: -
1) ನಾಲ್ಕು ಯುಗಗಳಾದ ಸತ್ಯ, ತ್ರೇತಾ, ದ್ವಾಪರ ಮತ್ತು ಕಲಿಯುಗಗಳಲ್ಲಿ, ಸತ್ಯ ಅಥವಾ ಕೃತಯುಗ ಪ್ರಾರಂಭವಾಗಿದ್ದು 'ಅಕ್ಷಯ ತೃತೀಯ' ದಿನದಂದು.
2) ವೇದವ್ಯಾಸರು ಮಹಾಭಾರತವನ್ನು ರಚಿಸುವ ಸಂದರ್ಭದಲ್ಲಿ ಅವರಿಗೆ ಸಹಾಯಕನಾಗಿ ಗಣೇಶನು ನೆರವಾಗಿದ್ದು 'ಅಕ್ಷಯ ತೃತೀಯ' ದಿನದಂದು.
3) ಭಗೀರಥನ ಪ್ರಯತ್ನದಿಂದ ಗಂಗಾವತರಣವಾಗಿದ್ದು (ಶಿವನ ಜಟೆಯಿಂದ ಗಂಗೆ ಭೂಮಿಗೆ ಇಳಿದದ್ದು) 'ಅಕ್ಷಯ ತೃತೀಯ' ದಿನದಂದು.
4) ದಶಾವತಾರಗಳಲ್ಲಿ ಒಂದಾದ 'ಪರಶುರಾಮಾವತಾರ' ಪ್ರಾರಂಭವಾಗಿದ್ದು (ಹುಟ್ಟಿದ ದಿನ) 'ಅಕ್ಷಯ ತೃತೀಯ' ದಿನದಂದು.
5) ಸಂಪತ್ತಿನ ಒಡೆಯ ಮತ್ತು ಯಕ್ಷರ ರಾಜ 'ಕುಬೇರ'ನಿಗೆ ನಿಧಿ/ಸಂಪತ್ತು ದೊರೆತದ್ದು 'ಅಕ್ಷಯ ತೃತೀಯ' ದಿನದಂದು.
6) ಕುಚೇಲನಿಗೆ ಗೆಳೆಯ ಶ್ರೀಕೃಷ್ಣನಿಂದ ಅನುಗ್ರಹ ಪ್ರಾಪ್ತಿಯಾಗಿದ್ದು 'ಅಕ್ಷಯ ತೃತೀಯ' ದಿನದಂದು.
7) ಅಮೃತ ಪ್ರಾಪ್ತಿಗಾಗಿ ದೇವತೆಗಳು ಮತ್ತು ರಾಕ್ಷಸರು ಸಮುದ್ರ ಮಂಥನ ಮಾಡುತ್ತಿದ್ದ ವೇಳೆ ಲಕ್ಷ್ಮೀ ಹುಟ್ಟಿದ್ದು 'ಅಕ್ಷಯ ತೃತೀಯ' ದಿನದಂದು.
8) ದುಶ್ಯಾಸನನು ದ್ರೌಪದಿಯ ವಸ್ತ್ರಾಪಹರಣ ಮಾಡುತ್ತಿದ್ದ ವೇಳೆ ಶ್ರೀಕೃಷ್ಣನು ಆಕೆಯ ಮಾನವನ್ನು (ಸೀರೆಯನ್ನು ನೀಡುವುದರ ಮೂಲಕ) ಕಾಪಾಡಿದ್ದು 'ಅಕ್ಷಯ ತೃತೀಯ' ದಿನದಂದು.
ಅಕ್ಷಯ ತೃತೀಯ ದಿನದ ಬಗ್ಗೆ ಇವಿಷ್ಟು ಪುರಾಣದ ಸಂಗತಿಗಳಾದರೆ, ನಾವಿರುವ ಕಲಿಯುಗದಲ್ಲಿ ಈ ಕೆಳಗಿನ ಸಂಗತಿಗಳು ಈ ರೀತಿ ಇವೆ:
1) ಆಂಧ್ರಪ್ರದೇಶದ ವಿಶಾಖಾಪಟ್ಟಣಂ ಬಳಿ ಇರುವ ಸಿಂಹಾದ್ರಿ ಅಥವಾ ಸಿಂಹಾಚಲಂ ದೇವಾಲಯದಲ್ಲಿ (ಹಿರಣ್ಯಕಶಿಪುವನ್ನು ಮಹಾವಿಷ್ಣುವು 'ನರಸಿಂಹಾವತಾರ'ದಲ್ಲಿ ಸಂಹರಿಸಿದ ಸ್ಥಳ) ವರ್ಷದ 364 ದಿನಗಳ ಕಾಲವೂ ಮೂಲದೇವರಾದ ನರಸಿಂಹಸ್ವಾಮಿಯ ಮುಖವನ್ನು ಚಂದನದಿಂದ ಮರೆಮಾಡಿರುತ್ತಾರೆ. ಕಾರಣ ನರಸಿಂಹಸ್ವಾಮಿಯ ಅತಿ ಉಗ್ರಸ್ವರೂಪ ಮೂರ್ತಿಯನ್ನು ನೋಡಲಾಗುವುದಿಲ್ಲ. ಆ.ದ.ರೆ.... 'ಅಕ್ಷಯ ತೃತೀಯ' ದಿನದಂದು ಮಾತ್ರ ದೇವರ ಮುಖವನ್ನು ಚಂದನದಿಂದ ಮರೆಮಾಚದೇ ನೈಜ ದರ್ಶಕಕ್ಕೆ ಅವಕಾಶವಿರುತ್ತದೆ. ಹೀಗಾಗಿ ಅಂದು ಬಹುತೇಕ ಆಂಧ್ರಪ್ರದೇಶ ಮತ್ತು ಇನ್ನೀತರ ಭಾಗದ ಜನರು ಅಲ್ಲಿ ನೆರೆದಿರುತ್ತಾರೆ.
2) 'ಅಕ್ಷಯ ತೃತೀಯ' ದಿನದಂದು ತಮ್ಮ ಸಾಮರ್ಥ್ಯಾನುಸಾರ ಹೋಮವನ್ನು ನೇರವೇರಿಸಿದ್ದಲ್ಲಿ ಅಥವಾ ಸಾರ್ವಜನಿಕವಾಗಿ ಹೋಮ ಆಯೋಜಿಸಿದ ಸ್ಥಳದಲ್ಲಿ ಭಾಗವಹಿಸಿದರೆ "ಅಶ್ವಮೇಘ" ಯಾಗ ಮಾಡಿದ ಪುಣ್ಯಪ್ರಾಪ್ತಿಯಾಗುತ್ತದೆ.
3) 'ಅಕ್ಷಯ ತೃತೀಯ' ದಿನದಂದು ತಮ್ಮ ಶಕ್ತ್ಯಾನುಸಾರ ಯಾವುದೇ ಹೊಸ ವಸ್ತುಗಳನ್ನು ಖರೀದಿಸಬಹುದಾಗಿದೆ. (ಧನಿಕರು ಮತ್ತು ಅನುಕೂಲಸ್ಥರು ಚಿನ್ನವನ್ನು ಖರೀದಿಸಬಹುದು, ಆದರೆ ಕಡ್ಡಯವಲ್ಲ) ಏನೂ ಬೇಡವೆಂದರೂ ಅಡಿಗೆಗೆ ಬಳಸುವ ಉಪ್ಪಿನ ಪ್ಯಾಕೇಟನ್ನಾದರೂ ಖರೀದಿಸಿದರೆ ಚಿನ್ನವನ್ನು ಖರೀದಿಸಿದ ಫಲವೇ ಪ್ರಾಪ್ತಿಯಾಗುತ್ತದೆ.
4) 'ಅಕ್ಷಯ ತೃತೀಯ' ದಿನದ ಇಡೀ ದಿನದ ಪ್ರತಿಯೊಂದು ಘಳಿಗೆಯೂ ಶುಭ ಮುಹೂರ್ತದ್ದೇ ಆಗಿರುತ್ತದೆ. ಅಂದು ಮಾತ್ರ ಯಾವುದೇ ರಾಹುಕಾಲ, ಗುಳಿಕಕಾಲ ಅಥವಾ ಇನ್ಯಾವುದೇ ಅಶುಭಕಾಲದ ಮಹತ್ವ ಇರುವುದಿಲ್ಲ.
ಈ ಮೇಲ್ಕಂಡ ವಿಷಯಗಳು 'ಅಕ್ಷಯ ತೃತೀಯ' ದಿನದ' ಮಹತ್ವವನ್ನು ಪಡೆದುಕೊಂಡಿದೆ. ಅದು ಬಿಟ್ಟು ಕೇವಲ ಚಿನ್ನವನ್ನು ಖರೀದಿಸಿದರೇ ಮಾತ್ರ 'ಅಕ್ಷಯ ತೃತೀಯ' ದಿನದ ಫಲಪ್ರಾಪ್ತಿ ಎಂದು ನಂಬುವುದು ಶುದ್ಧ ಮೂರ್ಖತನ ಅಥವಾ ಹುಚ್ಚುತನ. ಜನರ ಈ ಅಂಧಶ್ರದ್ಧೆಯ ಮನ:ಸ್ಥಿತಿಯನ್ನು ಚಿನ್ನದ ವ್ಯಾಪಾರಿಗಳು ಯಥೇಚ್ಛವಾಗಿ ಲಾಭವಾಗಿ ಪಡೆಯುತ್ತಿದ್ದಾರಷ್ಟೆ.
ಅಕ್ಷಯ ತೃತೀಯ ದಿನ. ಈ ದಿನ ಮಾಡಬೇಕಾದ ದಾನ ಮತ್ತು ಖರೀದಿಯಿಂದ ದೊರೆಯುವ ಯೋಗಾಯೋಗಗಳ ಬಗ್ಗೆ ಸಾಕಷ್ಟು ನಂಬಿಕೆಗಳು ಇವೆ. ಅರಶಿನ ಕುಂಕುಮ ಹಾಗೂ ತಾಂಬೂಲ ನೀಡಿದರೆ ರಾಜಯೋಗ ಲಭಿಸುತ್ತದೆ. ಹೊಸ ಬಟ್ಟೆ ದಾನ ಮಾಡಿದರೆ, ಆರೋಗ್ಯ ವೃದ್ಧಿಸುತ್ತದೆ. ತಾವರೆ ಹೂವು ದಾನ ಮಾಡಿದರೆ ಮಹಾವಿಷ್ಣುವಿನ ಕೃಪಾಕಟಾಕ್ಷದ ಸುಯೋಗ ಎನ್ನುವ ಪ್ರತೀತಿ ಇದೆ. ಅಲ್ಲದೆ ನವಧಾನ್ಯಗಳನ್ನು ದಾನ ಮಾಡುವುದರಿಂದ ಮೃತ್ಯುವಿನಂತಹ ದುರಂತಗಳು ದೂರವಾಗುತ್ತವೆ. ಮೊಸರನ್ನ ದಾನ ಮಾಡಿದರೆ ಆಯಸ್ಸು ವೃದ್ಧಿಸುತ್ತದೆ. ಗೋವಿಗೆ ಪೂಜೆ ಮಾಡಿ ಬಾಳೆ ಎಲೆಯಲ್ಲಿ ಸಿಹಿ ತಿನ್ನಿಸಿದರೆ ವಿವಾಹ ದೋಷಗಳು ಪರಿಹಾರವಾಗುವುದಾಗಿ ನಂಬಿಕೆ ಇದೆ. ಹಿಂದಿನ ಕಾಲದಲ್ಲಿ ಮಡಕೆಯಲ್ಲಿ ನೀರು ತುಂಬಿ ಅದರಲ್ಲಿ ಬಂಗಾರದ ನಾಣ್ಯವನ್ನು ಹಾಕಿ ದಾನ ಮಾಡುತ್ತಿದ್ದರು ಎನ್ನಲಾಗುತ್ತಿದ್ದು, ಇದು ಅತ್ಯಂತ ಶ್ರೇಷ್ಠ ದಾನ ಎನ್ನುವ ನಂಬಿಕೆಯೂ ಇತ್ತು.
ಹೀಗಾಗಿ ದಾನಧರ್ಮ ನೀಡುವ ಮೂಲಕ ಈ ದಿನವನ್ನು ಶ್ರದ್ಧಾಭಕ್ತಿಗಳಿಂದ ಆಚರಿಸುತ್ತಾರೆ. ಅಂದು ಕೆಲವರು ಪರಮೇಶ್ವರ ಮತ್ತು ವಿಷ್ಣುವನ್ನು ಪೂಜಿಸಿದರೆ, ಮತ್ತೆ ಹಲವರು ಲಕ್ಷ್ಮೀ ಪೂಜೆ ಮಾಡುತ್ತಾರೆ. ಪೂರಿ ಜಗನ್ನಾಥನ 'ಖಂಡೋತ್ಸವ' ಕೂಡಾ ಇದೆ ದಿನದಂದು ನಡೆಯುತ್ತದೆ. ಈ ದಿನ ಸೂರ್ಯ ಚಂದ್ರರು ಉತ್ತುಂಗದಲ್ಲಿ ಇರುತ್ತಾರೆ.ಸುವರ್ಣ ಯುಗದ ಆರಂಭ ,ಈ ದಿನವನ್ನು ಸುವರ್ಣ ಯುಗದ ಆರಂಭದ ಘಟ್ಟ ಎನ್ನಲಾಗುತ್ತದೆ. ಹೀಗಾಗಿ ಯಾವುದೇ ಪೂಜೆ ಪುನಸ್ಕಾರಗಳು, ವೃತ, ದಾನ, ಧರ್ಮ ಮಾಡಿದರೆ ಪುಣ್ಯ ಲಭಿಸುತ್ತದೆ. ಅಕ್ಷಯ ಎಂದರೆ ಮುಗಿಯದ ಅನ್ನುವ ಅರ್ಥ ಇರುವುದರಿಂದ ಈ ದಿನ ಹೊಸ ಕೆಲಸ ಆರಂಭಿಸಿದರೆ, ಶುಭವಾಗುತ್ತದೆ ಮತ್ತು ಹೆಚ್ಚಿನ ಅಭ್ಯುದಯವಾಗುತ್ತದೆ. ಚಿನ್ನ ಕೊಂಡರೆ ಅಥವಾ ಧರಿಸಿದರೆ, ಉತ್ತಮ ಭವಿಷ್ಯ ಲಭಿಸುತ್ತದೆ ಎನ್ನಲಾಗಿದೆ.
-ಹನುಮಂತ.ಮ.ದೇಶಕುಲಕಣಿ೯
ಸಾ.ಭೋಗೇನಾಗರಕೊಪ್ಪ-581196

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ