ಕನ್ನಡ ಸಾಹಿತ್ಯ, ಪತ್ರಿಕೋದ್ಯಮ, ಸಾಂಸ್ಕೃತಿಕ ವಲಯದಲ್ಲಿ ನೀಡಿರುವ
ಕಾಯಕಲ್ಪದಿಂದಾಗಿ ಕನ್ನಡ ಕುಲಪುರೋಹಿತರು ಎಂದು ಗೌರವಾನ್ವಿತ ಸ್ಥಾನ ಪಡೆದವರಾಗಿದ್ದಾರೆ.
> ಆಲೂರು ವೆಂಕಟರಾಯರು ಜುಲೈ 12 1880ರಂದು ಬಿಜಾಪುರದಲ್ಲಿ ಜನಿಸಿದರು. ಇವರ ವಂಶಜರು ಧಾರವಾಡದ ಬಳಿಯ ಆಲೂರಿಗೆ ಬಂದು ನೆಲೆಸಿದ್ದರಿಂದ ಆಲೂರು ಇವರ ಮನೆತನದ ಹೆಸರಾಯಿತು. ತಂದೆ ಭೀಮರಾಯರು ಶಿರಸ್ತೇದಾರರು, ತಾಯಿ ಭಾಗೀರಥಿಬಾಯಿ. ಅವರ ಪ್ರಾರಂಭಿಕ ಶಿಕ್ಷಣ ಧಾರವಾಡದಲ್ಲಿ ನೆರವೇರಿತು.ಆಲೂರರು 1903ರಲ್ಲಿ ಪುಣೆಯ ಫರ್ಗೂಸನ್ ಕಾಲೇಜಿನಲ್ಲಿ ಬಿ. ಎ ಪದವಿ ಪಡೆದು, ಮುಂಬಯಿಯಲ್ಲಿ ಕಾನೂನಿನ ಅಭ್ಯಾಸಕ್ಕೆ ತೊಡಗಿ 1905ರಲ್ಲಿ ವಕೀಲರಾದರು.
> ಬೇಸಿಗೆ ರಜೆಯಲ್ಲಿ, ನವ ವೃಂದಾವನ, ಆನೆಗೊಂದಿಗಳನ್ನು ಸಂದರ್ಶಿಸಿ ಅಲ್ಲಿಂದ ಹಂಪಿಗೆ ಹೋದರು. ಹಂಪಿಯ ಅವಶೇಷಗಳು ಅವರ ಮನಸ್ಸಿನ ಮೇಲೆ ಅಪೂರ್ವ ಪರಿಣಾಮ ಉಂಟುಮಾಡಿದವು. ಅವರ ಮಾತಿನಲ್ಲೇ ಹೇಳುವುದಾದರೆ: "ನಮ್ಮ ವಿಜಯನಗರವು ಅಲ್ಲಿ ಪ್ರತ್ಯಕ್ಷವಾಗಿಯೂ ವಿಸ್ತಾರವಾಗಿಯೂ ನನ್ನ ಮುಂದೆ ಬಿದ್ದಿದೆ. ಆ ದರ್ಶನವು ನನ್ನ ಮನದಲ್ಲಿ ವಿದ್ಯುತ್ತಿನ ಸಂಚಾರವನ್ನು ಮೂಡಿಸಿತು. ಚಲನಚಿತ್ರ ಪಟದಲ್ಲಿ ವಿದ್ಯುದ್ದೀಪದ ಬಲದಿಂದ ಮೂರ್ತಿಗಳು ಮೂಡುವಂತೆ ನನ್ನ ಹೃದಯದಲ್ಲಿ ಕರ್ನಾಟಕ ದೇವಿಯ ಸುಂದರ ಮೂರ್ತಿಯು ಒಡಮೂಡಹತ್ತಿತು. ಆ ದರ್ಶನವು ನನ್ನ ತಲೆಯಲ್ಲಿ ನಾನಾ ವಿದ ತರಂಗಗಳಿಗೆ ಇಂಬುಗೊಟ್ಟಿತು. ಹೃದಯ ಸಮುದ್ರವು ಅಲ್ಲೋಲ ಕಲ್ಲೋಲವಾಯಿತು. ಆ ದಿವಸವು ನನ್ನ ಜೀವನದ ಕ್ರಮದಲ್ಲಿ ಕ್ರಾಂತಿಯನ್ನು ಮಾಡಲಿಕ್ಕೆ ಕಾರಣವಾಯಿತು."
> ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ಪ್ರವೇಶಿಸಿದರು. ಸಂಘದ ಸ್ಥಿತಿ ಅಷ್ಟೊಂದು ಸಮರ್ಪಕವಾಗಿಲ್ಲದ ಕಾರಣ, ಅದರ ಕಾರ್ಯಭಾರವನ್ನು ಹೊತ್ತುಕೊಂಡರು. 'ವಾಗ್ಭೂಷಣ' ಪತ್ರಿಕೆಯ ಸಂಪಾದಕತ್ವ ವನ್ನು ವಹಿಸಿಕೊಂಡರು. ತಮ್ಮ ಸಾಮರ್ಥ್ಯದಿಂದ ಆ ಪತ್ರಿಕೆಗೆ ಹೊಸ ರೂಪವನ್ನು ಕೊಟ್ಟರು.ಅಂದಿನ ದಿನಗಳಲ್ಲಿ ಕನ್ನಡದಲ್ಲಿ ಪುಸ್ತಕಗಳ ಕೊರತೆಯನ್ನು ನೀಗಿಸಲು ಕರ್ನಾಟಕದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಎರಡು ಬಾರಿ ಗ್ರಂಥಕರ್ತರ ಸಮಾವೇಶವನ್ನು ಕರೆದರು. ಮೂರನೆಯ ಅಧಿವೇಶನ ಬೆಂಗಳೂರಿನಲ್ಲಿ ನಡೆಸಬೇಕೆಂಬ ಆಶಯ ರೂಪುಗೊಂಡಿದ್ದು ಆರು ವರ್ಷಗಳ ನಂತರ. 1915ರಲ್ಲಿ ನಡೆದ ಆ ಘಟನೆ ಕರ್ನಾಟಕ ಸಾಹಿತ್ಯ ಪರಿಷತ್ತಿಗೆ ನಾಂದಿ ಹಾಡಿತು. ಧಾರವಾಡದಲ್ಲಿದ್ದುಕೊಂಡೆ ಆಲೂರರು ಈ ಕಾರ್ಯವನ್ನು ಮಾಡಿದರು.
> ಸಾಹಿತ್ಯ ರಚನೆಯನ್ನು ಗಂಭೀರವಾಗಿ ಸ್ವೀಕರಿಸಿದ ಆಲೂರರು ಶಿಕ್ಷಣ ಮೀಮಾಂಸೆ, ಶ್ರೀ ವಿದ್ಯಾರಣ್ಯರ ಚರಿತ್ರೆ, ಕರ್ನಾಟಕ ಗತವೈಭವ, ಸಂಸಾರ ಸುಖ, ಕರ್ನಾಟಕದ ವೀರರತ್ನಗಳು, ಕರ್ನಾಟಕತ್ವದ ಸೂತ್ರಗಳು, ಕರ್ನಾಟಕತ್ವದ ವಿಕಾಸ, ರಾಷ್ರೀಯತ್ವದ ಮೀಮಾಂಸೆ, ಗೀತಾ ರಹಸ್ಯ, ನಾವು ಈಗ ಬೇಡುವ ಸ್ವರಾಜ್ಯ, ಸ್ವರಾಜ್ಯವೆಂದರೇನು?, ಸುಖವೂ ಶಾಂತಿಯೂ, ಸ್ವಾತಂತ್ರ್ಯ ಸಂಗ್ರಾಮ, ಗೀತಾಪ್ರಕಾಶ, ಗೀತಾಪರಿಮಳ, ಗೀತಾ ಸಂದೇಶ, ನನ್ನ ಜೀವನ ಸ್ಮೃತಿಗಳು, ಪೂರ್ವತರಂಗ, ಉತ್ತರತರಂಗ, ಮಧ್ವಸಿದ್ಧಾಂತ ಪ್ರವೇಶಿಕೆ, ಗೀತಾಭಾವ ಪ್ರದೀಪ ಪೂರ್ಣಬ್ರಹ್ಮವಾದ, ಬಿಡಿ ನುಡಿಗಳು ಮುಂತಾದವುಗಳನ್ನು ಪ್ರಕಟಿಸಿದರು.
> ಆಲೂರರ 'ಗತವೈಭವ'ದಲ್ಲಿನ ಈ ಕೆಳಗಿನ ಮಾತುಗಳಲ್ಲಿನ ವೀರ್ಯವತ್ತಾದ ಶೈಲಿ ಇಂತಿದೆ... "ನಾನು ಕನ್ನಡಿಗನು, ಕರ್ನಾಟಕವು ನನ್ನದು ಎಂಬ ಸದ್ವಿಚಾರ ತರಂಗಗಳಿಂದ ಯಾವನ ಹೃದಯವು ಆತ್ಮಾನಂದದಿಂದ ಪುಳಕಿತಗೊಳ್ಳುವುದಿಲ್ಲವೋ ಕನ್ನಡ ತಾಯಿಗೆ ಈಗ ಬಂದೊದಗಿರುವ ವಿಷಮ ಸ್ಥಿತಿಯಲ್ಲಿ ಯಾವಾತನ ಹೃದಯವು ತಲ್ಲಣಿಸುವುದಿಲ್ಲವೋ ಅದು ಹೃದಯವಲ್ಲ, ಕಲ್ಲಿನ ಬಂಡೆ; ದೇಹವಲ್ಲ, ಮೋಟು ಮರ". ಈ ಮಾತುಗಳು ಅಲೂರರು ಕಂಡ ಅಂದಿನ ಕನ್ನಡದ ದುರ್ಗತಿ, ಅದಕ್ಕಾಗಿ ಅವರು ರೂಢಿಸಿಕೊಂಡ ಮನೋಧರ್ಮ ತೋರುತ್ತವೆ. ಅವರು ಮಾಡಿದ ಕೆಲಸಗಳಾದರೋ ಅವರು ಮುಂದೆ ಕನ್ನಡಕ್ಕೆ ನೀಡಿದ ಕಾಯಕಲ್ಪವನ್ನು ಸಾರಿ ಹೇಳುತ್ತವೆ. ಕನ್ನಡದಲ್ಲಿ ಮುಂದೆ ಆದ ಕೆಲಸಗಳು, ಪಡೆದ ಕೀರ್ತಿ ಇವೆಲ್ಲಕ್ಕೂ ಆಲೂರು ವೆಂಕಟರಾಯರು ಮಾಡಿದ ಕಾರ್ಯಗಳು ಬುನಾದಿ ಒದಗಿಸಿವೆ.
> ಆಲೂರರು ಪ್ರಸಿದ್ಧ 'ಜಯಕರ್ನಾಟಕ' ಪತ್ರಿಕೆಯನ್ನು 1922ರಲ್ಲಿ ಸ್ಥಾಪಿಸಿದರು. ಆಲೂರರು ತಮ್ಮನ್ನು ತಾವು ಒಬ್ಬ ಸಾಹಿತಿಯೆಂದು ಎಲ್ಲಿಯೂ ಬಣ್ಣಿಸಿಕೊಂಡೇ ಇಲ್ಲ. ಆದರೆ, ದ.ರಾ ಬೇಂದ್ರೆ, ಬೆಟಗೇರಿ ಕೃಷ್ಣಶರ್ಮ, ಶ್ರೀರಂಗ, ಶಂ.ಭಾ ಜೋಷಿ, ರಂಗರಾವ್ ದಿವಕಾರ ಮುಂತಾದ ಹಲವು ಜನಪ್ರಿಯ ಸಾಹಿತಿ ಶ್ರೇಷ್ಠರಿಗೆ ಪೋಷಣೆ, ಪ್ರೋತ್ಸಾಹಗಳನ್ನು ನೀಡಿದರು. ಜಯಕರ್ನಾಟಕದ ಸಂಪಾದಕೀಯದಲ್ಲಿನ ಅವರು ಮಾತುಗಳು ಇಲ್ಲಿ ಉಲ್ಲೇಖನೀಯ. "ಕಚ್ಚಾ ಲೇಖಕರಿಗೂ, ಕಚ್ಚಾ ಕವಿಗಳಿಗೂ, ಅಶುದ್ಧ ಬರಹಗಳಿಗೂ ಆಸ್ಪದ ಕೊಟ್ಟಿರುವೆ. ಕರ್ನಾಟಕದ ಸಕಲಭಾಗಗಳಲ್ಲಿಯೂ ಲೇಖಕರು ಕವಿಗಳೂ ಹುಟ್ಟಬೇಕೆಂಬುದೇ ನನ್ನ ಉದ್ದೇಶ."
> ಆಲೂರರು ಮೂಲತಃ ಧಾರ್ಮಿಕ ವ್ಯಕ್ತಿ. ಬಾಲಗಂಗಾಧರ ತಿಲಕರ 'ಗೀತಾರಹಸ್ಯ'ದ ಅನುವಾದ ಕಾರ್ಯ, ಅವರ ರಾಜಕಾರಣ ಮತ್ತು ಧರ್ಮದೃಷ್ಟಿಗಳ ಸಮನ್ವಯಕ್ಕೆ ಒಂದು ದಾರಿ ಮಾಡಿಕೊಟ್ಟಿತು ಎನ್ನಬಹುದು. 'ಗೀತಾ ರಹಸ್ಯ'ದ ಅನುವಾದ ಕಾರ್ಯ ಕೈಗೊಂಡದ್ದು, ತಿಲಕರ ಒತ್ತಾಯದ ಮೇರೆಗೆ. ಅನುವಾದ ಎಲ್ಲರಿಗೂ ಸಮ್ಮತವಾಗಬೇಕೆಂಬ ದೃಷ್ಟಿಯಿಂದ, ಬಿ.ಎಂ.ಶ್ರೀ ಮತ್ತಿತರರ ಅಭಿಪ್ರಾಯ ಪಡೆದು ಅದನ್ನು ಪರಿಷ್ಕರಿಸಿದರು. ಆಲೂರರ ಜೊತೆಗೆ ಕೆರೂರು ವಾಸುದೇವಾಚಾರ್ಯರು ಕೊನೆಯ ಭಾಗದ ಕೆಲವು ಶ್ಲೋಕಗಳನ್ನು ಅನುವಾದ ಮಾಡಿ ಸಹಕರಿಸಿದರು.ಅಲೂರ ವೆಂಕಟರಾಯರದು ಆಧ್ಯಾತ್ಮಿಕ ಪ್ರವೃತ್ತಿ. 1931ರಲ್ಲಿ ಬ್ರಿಟಿಷ್ ಸರ್ಕಾರ ಅವರಿಗಾಗಿ 'ಸರ್ಚ್ ವಾರೆಂಟ್' ಅನ್ನು ಹೊರಡಿಸಿತು. ಅವರನ್ನು ಸೆರೆಹಿಡಿದು ಕಲಘಟಗಿಯಲ್ಲಿ ದಿಗ್ಭಂದನದಲ್ಲಿ ಇರಿಸಿದರು.
> ಇದರ ಪರಿಣಾಮ ಆಲೂರರ ಮೇಲೆ ಒಳ್ಳೆಯದನ್ನೇ ಮಾಡಿತು. ಅವರ ಆಧ್ಯಾತ್ಮ ಚಿಂತನೆಗೆ, ಅಧ್ಯಯನಕ್ಕೆ ಈ ಬಿಡುವು ಅನುವು ಮಾಡಿಕೊಟ್ಟಿತು. ಅವರು ಗೀತೆಯ ಬಗ್ಗೆ ಅನಂತರ ಬರೆದ ನಾಲ್ಕು ವಿದ್ವತ್ ಪೂರ್ಣ ಗ್ರಂಥಗಳ ಬರವಣಿಗೆಗೆ ಇಲ್ಲಿ ನಡೆಸಿದ ಚಿಂತನೆ ಮತ್ತು ಅಧ್ಯಯನಗಳೇ ಬುನಾದಿ ಹಾಕಿದವು. ಒಬ್ಬ ಮಾಧ್ವ ಧರ್ಮಾನುಯಾಯಿಯಾಗಿಯೂ ವೆಂಕಟರಾಯರು ಹಲವು ವಿಭಿನ್ನ ಮನೋಧರ್ಮದ ಗ್ರಂಥಗಳನ್ನು ಬರೆದರು.
> ರಾಜಕಾರಣದಿಂದ ದೂರವಾದ ಆಲೂರರು ಇನ್ನೊಂದು ಕಡೆ ಆಧ್ಯಾತ್ಮಿಕ ಜೀವನದತ್ತ ಒಲವು - ಇವರು ಸಾರ್ವಜನಿಕವಾಗಿ ದೂರಸರಿಯಲು ಕಾರಣವಾಯಿತು.
> ವರಕವಿ ದ.ರಾ. ಬೇಂದ್ರೆಯವರು ಅಲೂರರನ್ನು 'ಕರ್ನಾಟಕದ ಪ್ರಾಣೋಪಾಸಕರು' ಎಂದು ಕರೆದದ್ದು ಅರ್ಥಪೂರ್ಣವಾಗಿದೆ. ಇವರು ನಿಧನರಾದದ್ದು ಫೆಬ್ರುವರಿ 25 1964ರಲ್ಲಿ. ಹಾಗಾಗಿ ಅವರು ಕನ್ನಡ ಕುಲಪುರೋಹಿತರಾಗಿ ಕನ್ನಡಿಗರಲ್ಲಿ ನೆಲೆಸಿದ್ದಾರೆ.
> ("ಆಲೂರು ವೆಂಕಟರಾಯರ ಜನ್ಮದಿನ ಜುಲೈ 12 ರ ತನ್ನಿಮಿತ್ತ ಈ ಲೇಖನ.)
> -ಹನುಮಂತ.ಮ.ದೇಶಕುಲಕರ್ಣಿ.
> ಸಾ.ಭೋಗೇನಾಗರಕೊಪ್ಪ-581196
> ತಾ.ಕಲಘಟಗಿ ಜಿ.ಧಾರವಾಡ
> ಮೊ.ನಂ.9731741397

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ